Ticker

6/recent/ticker-posts
Responsive Advertisement

Sirsi: ಅಪಾಯದ ಅಂಚಿನಿಂದ ಪಾರು! ವಾಹನ ತಪ್ಪಿಸಲು ಹೋಗಿ ಗಟಾರಕ್ಕಿಳಿದ ಕೆಎಸ್‌ಆರ್‌ಟಿಸಿ ಬಸ್

ಶಿರಸಿ: ಶಿರಸಿ–ಕಿರುವತ್ತಿ ರಸ್ತೆಯ ಅಚನಳ್ಳಿ ಸಮೀಪದ ಭೂತಪ್ಪ ದೇವಸ್ಥಾನದ ಬಳಿ ಇಂದು ಬೆಳಿಗ್ಗೆ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಯ ಗಟಾರಕ್ಕಿಳಿದು ಒಂದು ಬದಿಗೆ ವಾಲಿದ ಘಟನೆ ನಡೆದಿದೆ.

ಕಿರುವತ್ತಿಯಿಂದ ಶಿರಸಿಯತ್ತ ಸಂಚರಿಸುತ್ತಿದ್ದ ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಎದುರಿನಿಂದ ವೇಗವಾಗಿ ಬಂದ ವಾಹನವನ್ನು ತಪ್ಪಿಸುವ ಪ್ರಯತ್ನದಲ್ಲಿ ಚಾಲಕರು ಬಸ್ ಅನ್ನು ರಸ್ತೆ ಬದಿಗೆ ತಿರುಗಿಸಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಬಸ್ ಗಟಾರಕ್ಕಿಳಿದು ಒಂದು ಬದಿಗೆ ವಾಲಿದೆ ಎಂದು ತಿಳಿದುಬಂದಿದೆ.

ಘಟನೆ ನಡೆದ ಕೂಡಲೇ ಸ್ಥಳೀಯರು ಮತ್ತು ಪ್ರಯಾಣಿಕರು ಬಸ್‌ನಲ್ಲಿದ್ದ ಎಲ್ಲರನ್ನು ಸುರಕ್ಷಿತವಾಗಿ ಹೊರಗೆ ಕರೆತಂದರು. ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ಗಾಯವಾಗಿಲ್ಲ ಅಥವಾ ಪ್ರಾಣಾಪಾಯ ಸಂಭವಿಸಿಲ್ಲ.

ನಂತರ ವಿದ್ಯಾರ್ಥಿಗಳು ಹಾಗೂ ಇತರ ಪ್ರಯಾಣಿಕರು ಪರ್ಯಾಯ ವಾಹನಗಳ ಮೂಲಕ ತಮ್ಮ ಗಮ್ಯಸ್ಥಾನಕ್ಕೆ ತೆರಳಿದರು. ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದರೂ, ಯಾವುದೇ ದೊಡ್ಡ ಅನಾಹುತ ಸಂಭವಿಸದ ಕಾರಣ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು