Ticker

6/recent/ticker-posts
Responsive Advertisement

Udupi: ಉಡುಪಿಯಲ್ಲಿ ಮಳೆಯ ರೌದ್ರಾವತಾರ! 7.3 ಸೆಂ.ಮೀ. ದಾಖಲೆ ಮಳೆ, ಮರ ಬಿದ್ದು 4 ಮನೆಗಳಿಗೆ ಹಾನಿ

ಉಡುಪಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಈ ಮುಂಗಾರಿನ ಅವಧಿಯ ಅತ್ಯಧಿಕ ಮಳೆಯಾಗಿದ್ದು, ಸರಾಸರಿ 7.3 ಸೆಂ.ಮೀ. ಮಳೆ ದಾಖಲಾಗಿದೆ. ಹಲವು ಪ್ರದೇಶಗಳಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮರಗಳು ಉರುಳಿ ಬೀಳುವ ಘಟನೆಗಳೂ ವರದಿಯಾಗಿವೆ.

ಭಾರೀ ಗಾಳಿ-ಮಳೆಯಿಂದ ಜಿಲ್ಲೆಯ ವಿವಿಧೆಡೆ ಮರಗಳು ನೆಲಕ್ಕುರುಳಿದ್ದು, ಒಂದೇ ಘಟನೆಯಲ್ಲಿ ನಾಲ್ಕು ಮನೆಗಳಿಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳೀಯ ಆಡಳಿತ ಮತ್ತು ಸಂಬಂಧಿತ ಇಲಾಖೆಗಳು ಹಾನಿಗೊಳಗಾದ ಪ್ರದೇಶಗಳಲ್ಲಿ ತೆರವು ಕಾರ್ಯವನ್ನು ಕೈಗೊಂಡಿದ್ದು, ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಸಂಚರಿಸದಂತೆ ಹಾಗೂ ಎಚ್ಚರಿಕೆಯಿಂದ ಇರಲು ಮನವಿ ಮಾಡಲಾಗಿದೆ.

ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ನಿವಾಸಿಗಳು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು