Ticker

6/recent/ticker-posts
Responsive Advertisement

Uttarakannda: ದಾಂಡೇಲಿ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ಅವಘಡ; ವಿಜಯಪುರದ ಪ್ರವಾಸಿಗನಿಗೆ ಗಂಭೀರ ಗಾಯ

ದಾಂಡೇಲಿಯ ಸಮೀಪದ ಖಾಸಗಿ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ಸಾಹಸ ಕ್ರೀಡೆ ವೇಳೆ ಸಂಭವಿಸಿದ ಅವಘಡದಲ್ಲಿ ವಿಜಯಪುರ ಮೂಲದ ಕುಬೇರ್ ಸುರಪುರ ಗಂಭೀರವಾಗಿ ಗಾಯಗೊಂಡಿದ್ದಾರೆ. ಸುರಕ್ಷತಾ ಲಾಕ್ ದೋಷಕ್ಕೀಡಾದ ಪರಿಣಾಮ ಅವರು ಸುಮಾರು 30–40 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ಗಾಯಾಳುವಿಗೆ ಮೊದಲು ದಾಂಡೇಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ವಿಜಯಪುರಕ್ಕೆ ಸ್ಥಳಾಂತರಿಸಲಾಗಿದೆ. ಘಟನೆ ಸಾಹಸ ಕ್ರೀಡೆಗಳಲ್ಲಿ ಸುರಕ್ಷತಾ ಕ್ರಮಗಳ ಮಹತ್ವವನ್ನು ಮತ್ತೊಮ್ಮೆ ನೆನಪಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು