Ticker

6/recent/ticker-posts
Responsive Advertisement

Uttarakannda: ಆರೋಗ್ಯ ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಅಂಕೋಲ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ವರದರಾಜ್ ಹೋಟೆಲ್ ಸಮೀಪ ಶನಿವಾರ ನಡೆದ ರಸ್ತೆ ಅಪಘಾತದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಾಹಿತಿಯ ಪ್ರಕಾರ, ಸಚಿವರು ಕಾರವಾರದಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಅವರ ಬೆಂಗಾವಲು ವಾಹನದ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತದ ತಕ್ಷಣವೇ ಸಚಿವ ಯು.ಟಿ. ಖಾದರ್ ಮಾನವೀಯತೆ ಪ್ರದರ್ಶಿಸಿ ಗಾಯಾಳುವಿಗೆ ತುರ್ತು ಚಿಕಿತ್ಸೆ ದೊರೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ.

ಅಪಘಾತದಲ್ಲಿ ಅಂಕೋಲ ತಾಲೂಕಿನ ಅಲಗೇರಿ ಗ್ರಾಮದ ನಿವಾಸಿ ಸಂದೀಪ್ ನಾಯಕ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಅಂಕೋಲದ ಆರ್ಯ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲೆಗೆ ಗಾಯವಾಗಿದ್ದರೂ ಸಕಾಲದಲ್ಲಿ ಚಿಕಿತ್ಸೆ ದೊರೆತ ಪರಿಣಾಮ ಅವರ ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ಮೂಲಗಳು ತಿಳಿಸಿವೆ.

ಈ ಘಟನೆ ಸಂಬಂಧ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು