Ticker

6/recent/ticker-posts
Responsive Advertisement

News: ಕರ್ನಾಟಕ ಬಂದ್: ಪ್ರತಿಭಟನೆಗೂ ಮುನ್ನವೇ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ!

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಿಂದ ಹೊರಬರುತ್ತಿದ್ದ ವೇಳೆ ಸದಾಶಿವನಗರ ಠಾಣೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆಸಿ, ಬಳಿಕ ಸರ್ಕಾರಕ್ಕೆ ಮನವಿ ಸಲ್ಲಿಸುವ ಯೋಜನೆಯನ್ನು ವಾಟಾಳ್ ನಾಗರಾಜ್ ಹೊಂದಿದ್ದರು ಎನ್ನಲಾಗಿದೆ.

ಇದೇ ವೇಳೆ, ಬೆಂಗಳೂರಿನಲ್ಲಿ ಬಂದ್‌ಗೆ ನಿರೀಕ್ಷಿತ ಮಟ್ಟದ ಪ್ರತಿಕ್ರಿಯೆ ಕಂಡುಬಂದಿಲ್ಲ. ಪ್ರಮುಖ ಕನ್ನಡಪರ ಸಂಘಟನೆಗಳು ಹಾಗೂ ಸಾರಿಗೆ ಒಕ್ಕೂಟಗಳ ಬೆಂಬಲದ ಕೊರತೆಯಿಂದಾಗಿ ನಗರದಲ್ಲಿ ವಾಹನ ಸಂಚಾರ ಸೇರಿದಂತೆ ಜನಜೀವನ ಬಹುತೇಕ ಸಹಜವಾಗಿಯೇ ಮುಂದುವರಿದಿದೆ.

ಬಂದ್‌ಗೂ ಮುನ್ನವೇ ವಾಟಾಳ್ ನಾಗರಾಜ್ ವಶಕ್ಕೆ — ಬೆಂಗಳೂರಿನಲ್ಲಿ ಬಂದ್‌ ಪರಿಣಾಮ ಹೇಗಿತ್ತು? 👀

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು