ಕಾರವಾರ: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಆಗಸ್ಟ್ ಮತ್ತು ಸೆಪ್ಟೆಂಬರ್ 2026ರ ಪಡಿತರ ಅಕ್ಕಿಯನ್ನು ಆಗಸ್ಟ್‌ನಲ್ಲೇ ಒಟ್ಟಿಗೆ ವಿತರಿಸಲಾಗುತ್ತಿದೆ.
ಜಿಲ್ಲೆಯ 15,818 ಅಂತ್ಯೋದಯ ಅನ್ನ ಯೋಜನೆ (AAY) ಕಾರ್ಡ್‌ದಾರರಿಗೆ ಎರಡು ತಿಂಗಳಿಗೆ ಒಟ್ಟು 70 ಕೆ.ಜಿ. ಅಕ್ಕಿ ನೀಡಲಾಗುತ್ತಿದೆ. ಪ್ರತಿ ತಿಂಗಳಿಗೆ 35 ಕೆ.ಜಿ.ಯಂತೆ ಅಕ್ಕಿ ವಿತರಣೆ ನಡೆಯಲಿದೆ.
ಅದೇ ರೀತಿ 2,88,833 ಆದ್ಯತಾ (BPL) ಪಡಿತರ ಚೀಟಿದಾರರಿಗೆ, ಪ್ರತಿ ಸದಸ್ಯರಿಗೆ ಎರಡು ತಿಂಗಳಿಗೆ ಒಟ್ಟು 10 ಕೆ.ಜಿ. ಅಕ್ಕಿ ಉಚಿತವಾಗಿ ನೀಡಲಾಗುತ್ತಿದೆ.
ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಣೆ ಆರಂಭವಾಗಿದ್ದು, ಎರಡೂ ತಿಂಗಳ ಪಡಿತರ ಪಡೆಯಲು ಪ್ರತಿ ತಿಂಗಳಿಗೆ ಪ್ರತ್ಯೇಕವಾಗಿ ಬೆರಳಚ್ಚು ನೀಡಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.
ನಿಗದಿತ ಪ್ರಮಾಣಕ್ಕಿಂತ ಕಡಿಮೆ ಅಕ್ಕಿ ನೀಡಿದರೆ ಅಥವಾ ಹಣ ಕೇಳಿದರೆ ಸಂಬಂಧಪಟ್ಟ ಆಹಾರ ಶಿರಸ್ತೇದಾರರು, ಆಹಾರ ನಿರೀಕ್ಷಕರು ಅಥವಾ ಆಹಾರ, ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಿಗೆ ದೂರು ಸಲ್ಲಿಸಬಹುದು. ಉಚಿತ ಸಹಾಯವಾಣಿ: 1967.
ಈ ಕುರಿತು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 ಕಾಮೆಂಟ್‌ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.